ಬಂಟ್ವಾಳ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಘಟಕದ ವತಿಯಿಂದ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನವನ್ನು ಸೆ.೬ ರಂದು ರಾತ್ರಿ ಶ್ರೀ ಮಹಾದೇವಿ ಮಹಮ್ಮಾಯಿ ಕೂಡಿಬೈಲು ದೇವಸ್ಥಾನದಲ್ಲಿ ಶ್ರೀ ಕೃಷ್ಣ ದೇವರ ಹಾಗೂ ಭಾರತ ಮಾತೆಯ ಭಾವಚಿತ್ರ ಇಟ್ಟು ಶ್ರೀ ವೀರಾಂಜನೇಯ ಭಜನಾ ಮಂಡಳಿ ನಾವೂರು ಇವರಿಂದ ಭಜನಾ ಕಾರ್ಯಕ್ರಮದ ಮೂಲಕ ಅಚರಿಸಲಾಯಿತು.
ನಂತರ ನಡೆದ ಮಹಾಪೂಜೆ ಬಳಿಕ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಸೆಪ್ಟೆಂಬರ್ ೦೨ ರಂದು ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಕ್ಕೆ ಹೋಲಿಸಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವುದಾಗಿ ನೀಡಿದ ಹೇಳಿಕೆಗೆ ಪ್ರತಿಯಾಗಿ ಹೇಳಿಕೆ ನೀಡಿದವರು ಅದೇ ರೋಗ ಬಂದು ಭೂ ಲೋಕದಿಂದ ನಿರ್ಮೂಲನೆ ಆಗಲಿ ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಘಟಕದ ವತಿಯಿಂದ ದೇವರಲ್ಲಿ ಪ್ರಾರ್ಥಿಸಲಾಯಿತು.
ಈ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಪುತ್ತೂರು ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ ಅವರು ಬೌದ್ಧಿಕ್ ನೆರವೇರಿಸಿದರು. ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ಟಾಳ ಪ್ರಖಂಡದ ಸಾಪ್ತಾಹಿಕ್ ಮಿಲನ್ ಪ್ರಶಾಂತ್ ಕೊಟ್ಟಾರಿ, ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಊರಿನ ಭಕ್ತರು ಉಪಸ್ಥಿತರಿದ್ದರು