
ಸಕಲೇಶಪುರ: ನಗರದ ಹೇಮಾವತಿ ಸೇತುವೆ ಸಮೀಪ ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸವಾರನ ಕೈಗೆ ಗಾಯವಾಗಿದೆ. ರಸ್ತೆ ಅಗಲೀಕರಣ ಕಾಮಗಾರಿ ನಡೆದಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದು, ಪದೇಪದೇ ಅಪಘಾತಗಳು ಸಂಭವಿಸುತ್ತಿವೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ. ಈ ರಸ್ತೆಯಲ್ಲಿ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ, ಅಪಘಾತಗಳನ್ನು ತಡೆಗಟ್ಟಲು ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.




