ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ  ನಗರದಲ್ಲಿ ಭರದ ಸಿದ್ಧತೆ

Share with

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ – ನಗರದಲ್ಲಿ ಭರದ ಸಿದ್ಧತೆ
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಹಾಗೂ ಆಡಳಿತಾತ್ಮಕ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಪ್ರಧಾನಿಗಳ ಭೇಟಿಯನ್ನು ಯಶಸ್ವಿಗೊಳಿಸಲು ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುತ್ತಿವೆ. ಪ್ರಧಾನಿಗಳು ಭಾಗವಹಿಸಲಿರುವ ಕಾರ್ಯಕ್ರಮದ ಸ್ಥಳಗಳಲ್ಲಿ ಭದ್ರತೆ, ಸಂಚಾರ ವ್ಯವಸ್ಥೆ, ವೇದಿಕೆ ನಿರ್ಮಾಣ ಸೇರಿದಂತೆ ವಿವಿಧ ಸಿದ್ಧತೆಗಳಿಗೆ ಆದ್ಯತೆ ನೀಡಲಾಗಿದೆ.
ಇಂದು (ನವೆಂಬರ್ 13) ಬೆಳಿಗ್ಗೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಗಣ್ಯರು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಬೆಂಗಳೂರಿನ ಜಿಗಣಿ ಸಮೀಪದ ಎಸ್‌-ವ್ಯಾಸ ವಿಶ್ವವಿದ್ಯಾಲಯದ ಪ್ರಶಾಂತಿ ಕುಟೀರದಲ್ಲಿ ಆಯೋಜಿಸಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ತಾವರೆಕೆರೆ ಮೆಟ್ರೋ ನಿಲ್ದಾಣದಿಂದ ಐಐಎಂಬಿ ಮೆಟ್ರೋ ನಿಲ್ದಾಣದವರೆಗೆ ನಮ್ಮ ಮೆಟ್ರೋದ ಪಿಂಕ್ ಲೈನ್‌ಗೆ ಚಾಲನೆ ನೀಡಿ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ. ಸುಮಾರು 15,600 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ರಾಷ್ಟ್ರಕ್ಕೆ ಸಮರ್ಪಣೆ ಮಾಡಲಿದ್ದಾರೆ. ಇದರಲ್ಲಿ ನಗರ ಸಾರಿಗೆ, ರೈಲ್ವೆ, ನವೀಕರಿಸಬಹುದಾದ ಇಂಧನ, ವಿದ್ಯುತ್ ಪ್ರಸರಣ, ತ್ಯಾಜ್ಯ ನಿರ್ವಹಣೆ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳ ಯೋಜನೆಗಳು ಒಳಗೊಂಡಿವೆ. ಅಲ್ಲದೆ, ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೂ ಹಸಿರು ನಿಶಾನೆ ತೋರಿಸಲಿದ್ದಾರೆ. ಪ್ರಧಾನಮಂತ್ರಿಗಳ ಈ ಭೇಟಿಯಿಂದ ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ, ಸಾರಿಗೆ ಸಂಪರ್ಕ ಹಾಗೂ ಸಾರ್ವಜನಿಕ ಸೇವೆಗಳಿಗೆ ಮತ್ತಷ್ಟು ವೇಗ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.


Share with

Leave a Reply

Your email address will not be published. Required fields are marked *