ನೇರಳಕಟ್ಟೆಯಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿ ಹೊಡೆದು 9ನೇ ತರಗತಿ ವಿದ್ಯಾರ್ಥಿನಿ ಸಾವು

Share with

ಬಂಟ್ವಾಳ: ಶಾಲೆಯಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿ ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದು ಮೃತಪಟ್ಟ ದಾರುಣ ಘಟನೆ ಮಾಣಿ ಸಮೀಪದ ನೇರಳಕಟ್ಟೆಯಲ್ಲಿ ನವೆಂಬರ್ 19ರ ಸಂಜೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ನೇರಳಕಟ್ಟೆ ನಿವಾಸಿ ಇಲ್ಯಾಸ್ ಅವರ ಪುತ್ರಿ ಫಾತಿಮಾ ಇಝಾಹಾ ಇಲ್ಯಾಸ್ (9ನೇ ತರಗತಿ) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟುವಿನ ಜನಪ್ರಿಯ ಸೆಂಟ್ರಲ್ ಸ್ಕೂಲ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಶಾಲೆ ಮುಗಿಸಿ ಕಂಬಳಬೆಟ್ಟುವಿನಿಂದ ಕಬಕಕ್ಕೆ ಬಂದಿದ್ದ ವಿದ್ಯಾರ್ಥಿನಿ, ಅಲ್ಲಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಂಬಳಬೆಟ್ಟುವಿಗೆ ಪ್ರಯಾಣಿಸಿದ್ದಳು. ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಗುಜರಾತ್ ನೋಂದಣಿಯ ಲಾರಿ (GJ 27 T 3022) ಡಿಕ್ಕಿ ಹೊಡೆದಿದೆ. ಬಳಿಕ ಲಾರಿ ವಿದ್ಯಾರ್ಥಿನಿಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ವಿಷಯ ತಿಳಿದು ವಿಟ್ಲ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ವಿದ್ಯಾರ್ಥಿನಿ ತಂದೆ, ತಾಯಿ ಹಾಗೂ ತಮ್ಮನನ್ನು ಅಗಲಿದ್ದಾಳೆ.


Share with

Leave a Reply

Your email address will not be published. Required fields are marked *