ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ!

Share with


ಅಲೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದರಿಂದ ಬಡವರು ಹಾಗೂ ಮಧ್ಯಮ ವರ್ಗದ ಜನರು ಜೀವನ ನಡೆಸುವುದು ದುಸ್ತರವಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ದಿನಬಳಕೆಯ ವಸ್ತುಗಳು, ಅಡುಗೆ ಅನಿಲ, ಪೆಟ್ರೋಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಕುಟುಂಬದ ಆರ್ಥಿಕ ಪರಿಸ್ಥಿತಿ ಸಂಕಷ್ಟಕ್ಕೆ ಸಿಲುಕಿದೆ. ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಮುಖಂಡರು ಟೀಕಿಸಿದರು. ಈ ಸಂದರ್ಭದಲ್ಲಿ ಶಾಸಕ ಸಿಮೆಂಟ್ ಮಂಜು ಮಾತನಾಡಿ, ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಜನಸಾಮಾನ್ಯರು ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಬದಲು ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕಲಾಗುತ್ತಿದೆ. ಬಡವರು, ರೈತರು ಹಾಗೂ ಮಧ್ಯಮ ವರ್ಗದ ಜನರ ಹಿತ ಕಾಪಾಡುವಲ್ಲಿ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.


Share with

Leave a Reply

Your email address will not be published. Required fields are marked *