ಕಾರಿನಲ್ಲಿ ಗೋಮಾಂಸ ಸಾಗಾಟ ಆರೋಪ – ಪೊಲೀಸರ ಕಾರ್ಯಾಚರಣೆ, ಚಾಲಕ ಪರಾರಿ!

Share with


ಸಕಲೇಶಪುರ: ಪಟ್ಟಣದಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ ಘಟನೆ ವರದಿಯಾಗಿದೆ. ಡಿಸೆಂಬರ್ ಐ20 ಕಾರಿನಲ್ಲಿ ಗೋಮಾಂಸ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಹಿಂದೂ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರಿಗೆ ಲಭಿಸಿದ್ದು, ತಕ್ಷಣ ಕಾರ್ಯಕರ್ತರು ಪೊಲೀಸರ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಕಾರ್ಯಕರ್ತರಿಂದ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಬೈಪಾಸ್ ರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಲು ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕಾರಿನಲ್ಲಿದ್ದ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ಪೊಲೀಸರು ಕಾರನ್ನು ಪರಿಶೀಲಿಸಿದಾಗ ಅದರೊಳಗೆ ಚೀಲಗಳಲ್ಲಿ ಮಾಂಸ ಪತ್ತೆಯಾಗಿದೆ ಎನ್ನಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಕುತೂಹಲದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಕಾರನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ. ಮಾಂಸದ ಸ್ವರೂಪ ಹಾಗೂ ಸಾಗಾಟದ ಹಿಂದಿನ ಉದ್ದೇಶದ ಕುರಿತು ಅಧಿಕೃತ ದೃಢೀಕರಣ ಮತ್ತು ಹೆಚ್ಚಿನ ಪೊಲೀಸ್ ಮಾಹಿತಿಗಾಗಿ ಸಾರ್ವಜನಿಕರು ಕಾಯುತ್ತಿದ್ದಾರೆ.


Share with

Leave a Reply

Your email address will not be published. Required fields are marked *