ಪುತ್ತೂರು: ಹಿರಿಯ ಕಾಂಗ್ರೆಸ್ ಮುಖಂಡ, ಪುತ್ತೂರು ಮಹಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಕಿಲ್ಲೆ ಮೈದಾನದ ದೇವತಾ ಸಮಿತಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಅವರು ಸೆ. 10ರಂದು ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತ ದೇಹವನ್ನು ನಾಳೆ ಪುತ್ತೂರು ನೆಲ್ಲಿಕಟ್ಟೆಯಲ್ಲಿರುವ ನಿವಾಸಕ್ಕೆ ತರಲಾಗುವುದು ಎಂದು ಮಾಹಿತಿ ತಿಳಿದುಬಂದಿದೆ.