ಬೆಳ್ತಂಗಡಿ: ಧರ್ಮಸ್ಥಳದ ಮಣ್ಣಸಂಕ ಬಳಿ ಅತ್ಯಾಚಾರ ನಡೆಸಿ ಕೊಲೆಗೀಡಾದ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರತಿಭಟನೆಯ ಜ್ವಾಲೆ ಹತ್ತಿಕೊಂಡಿದೆ.
ಈಗಾಗಲೇ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಒಂದು ದಿನದ ಸಾಂಕೇತಿಕ ಪ್ರತಿಭಟನೆ ನಡೆಸಿದ್ದು, ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ ಮಾಡಿದ್ದಾರೆ.
ಸಂತ್ರಸ್ತೆ ಸೌಜನ್ಯ ಹಾಗೂ ಆಕೆಯ ಕುಟುಂಬಸ್ಥರಿಗೆ ನ್ಯಾಯ ದೊರಕಿಸುವಂತೆ ವಿದ್ಯಾರ್ಥಿ ಸಂಘ ಒತ್ತಾಯ ಮಾಡಿದ್ದು ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಸೌಜನ್ಯಳ ನ್ಯಾಯಕ್ಕಾಗಿ ಮುಂದೆ ಬೃಹತ್ ಪ್ರತಿಭಟನೆ ಹಾಗೂ ಬಂದ್ ನಡೆಸಲು ತೀರ್ಮಾನಿಸಲಾಗಿದ್ದು, ಈ ಕುರಿತಂತೆ ವಿದ್ಯಾರ್ಥಿ ಒಕ್ಕೂಟ ಚಿಂತನೆ ನಡೆಸುತ್ತಿದೆ. ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ತಾಯಿ ಕುಸುಮಾವತಿ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.