ಬೆಂಗಳೂರು: ಮಳೆಯಿಲ್ಲದೆ ಬಾಧಿತವಾಗಿರುವ ರಾಜ್ಯದ ೧೯೫ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳು ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಬರ ಘೋಷಣೆ ಮಾಡಿದೆ.
ಈ ಎಲ್ಲಾ ತಾಲೂಕುಗಳಲ್ಲಿ ಬೆಳೆ ಹಾನಿ ಸಮೀಕ್ಷೆ ಕೈಗೊಂಡ ನಂತರ ರಾಜ್ಯದ ೧೬೧ ತಾಲೂಕುಗಳನ್ನು ತೀವ್ರ ಹಾಗೂ ೩೪ ತಾಲೂಕುಗಳನ್ನು ಸಾಧಾರಣ ಬರಪೀಡಿತ ಪ್ರದೇಶಗಳು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಘೋಷಣೆ ಮಾಡಿದೆ.
ಸರ್ಕಾರದಿಂದ ಕಾಲ-ಕಾಲಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.