ಬೆಂಗಳೂರು: ಸ್ಯಾಂಡಲ್‌ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಪತ್ನಿ ಪ್ರೇರಣಾ ಶಂಕರ್ ಅವರು ಗೌರಿ ಗಣೇಶ ಹಬ್ಬದ ದಿನವೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಬೆಂಗಳೂರಿನ ಕೆ.ಆರ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಪ್ರೇರಣಾ ಅವರಿಗೆ ನಾರ್ಮಲ್ ಹೆರಿಗೆಯಾಗಿದ್ದು, ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿಗೆ ಹೆಣ್ಣು ಮಗು ಇದೆ.