ಮಂಗಳೂರು: ಮಂಗಳೂರು ನಗರ ದಕ್ಷಿಣದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಅವರು ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭದ್ರತೆ ಹೆಚ್ಚಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
“ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇತ್ತೀಚೆಗೆ ಬಂಧಿಸಿದ ಅರಾಫತ್ ಅಲಿ ಹಾಗೂ ೨೦೨೨ರ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್ ಇಬ್ಬರು ಎನ್.ಐ.ಎ ತಂಡ ನಡೆಸಿದ ತನಿಖೆ ವೇಳೆ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಪ್ರಮುಖ ಟಾರ್ಗೆಟ್ ಮಂಗಳೂರಿನ ಇತಿಹಾಸ ಪ್ರಸಿದ್ಧ ಕದ್ರಿ ಮಂಜುನಾಥ ದೇವಾಲಯವೇ ಆಗಿತ್ತು ಎನ್ನುವುದು ಬೆಳಕಿಗೆ ಬಂದಿದ್ದರಿಂದ ಧಾರ್ಮಿಕ ಕ್ಷೇತ್ರಗಳಿಗೆ ಭದ್ರತೆ ಹೆಚ್ಚಿಸಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಅವರು ಸರ್ಕಾರಕ್ಕೆ ಅಗ್ರಹಿಸಿದ್ದಾರೆ.