ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ರಿಯಲ್ಲಿ ಸೆ. ೧೬ರಂದು ದಾಖಲಾಗಿದ್ದ ಮೋಟರ್ ಸೈಕಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿ ಗ್ರಾಮದ ನಿವಾಸಿಯಾದ ಸುಬ್ರಮಣಿ (26) ಬಂಧಿತ ಆರೋಪಿಯಾಗಿದ್ದು, ಸೆ.16ರಂದು ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಸರಳಿಪಂಜ ಎಂಬಲ್ಲಿ ವಾಹನಗಳ ತಪಾಸಣೆಯಲ್ಲಿ ನಿರತರಾಗಿರುವ ವೇಳೆ ಸುಳ್ಯ ಎಸ್.ಐ ಈರಯ್ಯ ಹಾಗೂ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿದೆ.
ಆರೋಪಿಯ ಮೇಲೆ ಹಲವು ಪ್ರಕರಣಗಳು ದಾಖಲಾಗಿದ್ದು, ಕೆಲವು ದಿನಗಳ ಹಿಂದೆ ಸುಳ್ಯ ಪೇಟೆಯಲ್ಲಿ ವ್ಯಕ್ತಿಯೊಬ್ಬರ ಚಿನ್ನದ ಸರ ತೆಗೆದುಕೊಂಡು ಹೋಗಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.