ಬಂಟ್ವಾಳ: ಜ್ವರಕ್ಕೆ ಔಷಧ ತರಲು ಆಸ್ಪತ್ರೆಗೆ ತೆರಳಿದ್ದ ವ್ಯಕ್ತಿಯೊಬ್ಬರು ವೈದ್ಯರು ಪರೀಕ್ಷಿಸುವ ಮುನ್ನವೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಮೃತರನ್ನು ಪ್ರಕಾಶ್ ಬೆಳ್ಳೂರು (೪೩) ಎಂದು ಗುರುತಿಸಲಾಗಿದೆ. ಅವರು ಬಿಜೆಪಿಯ ಸಕ್ರಿಯ ಯುವ ಸದಸ್ಯರಾಗಿದ್ದರು. ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಅವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು.
ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದ ಅವರು ವೈದ್ಯರು ಪರೀಕ್ಷಿಸುವ ಮುನ್ನವೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದಿದ್ದಾರೆ. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಪ್ರಕಾಶ್ ಬೆಳ್ಳೂರು ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಶಾಸಕ ರಾಜೇಶ್ ನಾಯ್ಕ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಸೇರಿದಂತೆ ಹಲವು ಮುಖಂಡರು ಸಂತಾಪ ಸೂಚಿಸಿದ್ದಾರೆ.