ಮಂಗಳೂರು: ಪಾರ್ಕ್ ಮಾಡಿದ್ದ ಟೆಂಪೋ ಟ್ರ್ಯಾವೆಲರ್ ಕಳ್ಳತನ ಮಾಡಿದ್ದ ಖದೀಮರನ್ನು ಉರ್ವ ಠಾಣಾ ಪೊಲೀಸರು ಬಂಧಿಸಿ, ಆರೋಪಿಗಳಿಂದ ಟೆಂಪೊ ಟ್ರಾವೆಲರ್ ಅನ್ನು ವಶಪಡಿಸಿಕೊಂಡಿದ್ದಾರೆ.
ಉರ್ವ ಠಾಣಾ ವ್ಯಾಪ್ತಿಯ ಕುಂಟಿಕಾನ ಫ್ಲೈ ಓವರ್ ಬಳಿ ಟೆಂಪೋ ಟ್ರಾವೆಲರ್ ವಾಹನವನ್ನು ಸೆಪ್ಟೆಂಬರ್ 14ರ ರಾತ್ರಿ 8.30 ರ ವೇಳೆಗೆ ಪಾರ್ಕ್ ಮಾಡಲಾಗಿದ್ದು, ಸೆಪ್ಟೆಂಬರ್ 15ರಂದು ಬೆಳಗ್ಗೆ ಬಂದು ನೋಡಿದಾಗ ವಾಹನ ಇರಲಿಲ್ಲ, ಅದರಿಂದ ವಾಹನದ ವಾರಸುದಾರರು ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡು ವಾಹನ ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸಿ, ಬಂಧಿತರಿಂದ ಟೆಂಪೋ ಟ್ರಾವೆಲರ್ ಅನ್ನು ವಶಪಡಿಸಿಕೊಳ್ಳಲಾಗಿದೆ.