
ಬಂಟ್ವಾಳ: ಕಾರು ಡಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಬಳಿ ನಡೆದಿದೆ.

ಕೆಂಪು ಗುಡ್ಡೆ ನಿವಾಸಿ ವಿನಾಯಕ ಪೈ ಮೃತಪಟ್ಟ ವ್ಯಕ್ತಿಯಾಗಿದ್ದು, ವಿನಾಯಕ ಪೈ ಅವರ ಮನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಬೆಳಗ್ಗಿನ ಉಪಹಾರ ತರಲು ವಗ್ಗದ ಹೊಟೇಲ್ ಗೆ ಹೋಗುವ ವೇಳೆ ಈ ಅಪಘಾತ ನಡೆದಿದೆ ಎಂದು ಹೇಳಲಾಗಿದೆ.
ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವ್ಯಾಗನಾರ್ ಕಾರು ರಿಕ್ಷಾಕ್ಕೆ ಡಿಕ್ಕಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ವಿನಾಯಕ ಪೈ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಸಾಗಿಸುವ ದಾರಿ ಮಧ್ಯದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮೆಲ್ಕಾರ್ ಸಂಚಾರಿ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




