ಮೀನು ಸಾಗಾಟದ ವಾಹನ ಪಲ್ಟಿ

Share with

ಮಲ್ಪೆ ಬಂದರಿನಿಂದ ಉಳ್ಳಾಲಕ್ಕೆ ಮೀನು ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ.

ಮಂಗಳೂರು: ಉಡುಪಿಯ ಮಲ್ಪೆ ಬಂದರಿನಿಂದ ಉಳ್ಳಾಲಕ್ಕೆ ಮೀನು ಸಾಗಿಸುತ್ತಿದ್ದ ಪಿಕಪ್ ವಾಹನದ ಟಯರ್ ಸಿಡಿದು ವಾಹನ ಪಲ್ಟಿಯಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ.

ಇದರಿಂದ ವಾಹನವು ನೇತ್ರಾವತಿ ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಪಿಕಪ್ ವಾಹನ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಇತರ ವಾಹನಗಳಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಘಟನೆಯ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗ್ತಾ ಇದೆ.


Share with

Leave a Reply

Your email address will not be published. Required fields are marked *