ಕಡಬ: ರಾತ್ರಿ ವೇಳೆ ಮಸೀದಿ ಕಾಂಪೌಂಡ್ ಒಳಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಬಗ್ಗೆ ವರದಿಯಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಒಬ್ಬ ಆರೋಪಿಯನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. ಕಡಬ ಪೊಲೀಸ್ ಠಾಣೆ ವ್ಯಾಪ್ತಿಯ ಮರ್ದಾಳ ಬದ್ರಿಯಾ ಜುಮಾ ಮಸೀದಿ ಕಾಂಪೌಂಡ್ ಒಳಗೆ ಬೈಕ್ ನಲ್ಲಿ ಬಂದಿದ್ದ ಇವರು ಮಸೀದಿ ಆವರಣದಲ್ಲಿ ಜೈ ಶ್ರೀ ರಾಮ್ ಘೋಷಣೆ ಕೂಗಿದ್ದು, ನಂತರ ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಪರಿಶೀಲಿಸಿದ್ದು, ತನಿಖೆ ನಡೆಸಿ ಆರೋಪಿಗಳಲ್ಲಿ ಓರ್ವನನ್ನು ಬಂಧಿಸಿದ್ದಾರೆ.