ಕಾಸರಗೋಡು: ಕಾಸರಗೋಡು ಜಿಲ್ಲಾ ಸಹಾಯಕ ಜಿಲ್ಲಾಧಿಕಾರಿ ಸಂಚರಿಸುತ್ತಿದ್ದ ಬೊಲೆರೊ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಸೋಮವಾರ(ಸೆ.25) ಸಂಜೆ ಚೆಮ್ನಾಡ್‌ನಲ್ಲಿ ನಡೆದಿದೆ.
ಘಟನೆಯಿಂದ ಸಹಾಯಕ ಜಿಲ್ಲಾಧಿಕಾರಿ ಕೆ.ದಿಲೀಪ್ ಕುಮಾರ್, ಗನ್ ಮ್ಯಾನ್ ರಂಜಿತ್ ಗಾಯಗೊಂಡಿದ್ದು, ಪರಿಸರ ವಾಸಿಗಳು ಗಾಯಾಳುಗಳನ್ನು ಕೂಡಲೇ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲಪಿಸಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ ಗಾಯಾಳುಗಳನ್ನು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಜಿಲ್ಲೆಯ ಮೇಲ್ಪರಂಬದಿಂದ ಕಾಸರಗೋಡಿಗೆ ವಾಪಸಾಗುತ್ತಿದ್ದ ವೇಳೆ ಸಂಚರಿಸುತ್ತಿದ್ದ ಬೊಲೆರೊ ವಾಹನ ಒಳ ರಸ್ತೆ ಮೂಲಕ ಇನ್ನೊಂದು ವಾಹನ ಬಂದುದರಿಂದ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ದುರ್ಘಟನೆ ನಡೆದಿದೆ ಎನ್ನಲಾಗಿದೆ.