ಕಡಬ: ಕಡಬ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಇದೀಗ ಐತ್ತೂರು ಗ್ರಾಮದ ನೇಲ್ಯಡ್ಕ ಎಂಬಲ್ಲಿ ಕಾಡಾನೆಯೊಂದು ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿದೆ. ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಐತ್ತೂರು ಗ್ರಾಮದ ಗೇರ್ತಿಲ ನಿವಾಸಿ ಚೋಮ ಎಂಬವರು ಮರ್ದಾಳದಿಂದ ಮನೆ ಕಡೆಗೆ ಹೋಗುತ್ತಿದ್ದ ವೇಳೆ ಸುಳ್ಯ ಎಂಬಲ್ಲಿ ಕಾಡಾನೆ ದಾಳಿ ನಡೆಸಿದೆ. ಈ ಘಟನೆಯಿಂದಾಗಿ ಕಡಬ ತಾಲೂಕಿನ ಜನರ ಆತಂಕ ಇನ್ನಷ್ಟು ಹೆಚ್ಚಾಗಿದೆ.