ವಿಟ್ಲ: ವಿದ್ಯಾರ್ಥಿನಿಯೊಬ್ಬಳಿಗೆ ಹಿಂಬಾಲಿಸಿ ಕಿರುಕುಳ ನೀಡಿದ ಯುವಕನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಪೆರುವಾಯಿ ಮೂಲದ ಯುವಕನೋರ್ವ ಕೇಪು ಗ್ರಾಮದ ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಇತ್ತೀಚೆಗೆ ಶಾಲೆ ಸಮೀಪ ಬಂದು ಬಾಲಕಿಯನ್ನು ಬೈಕ್ ನಲ್ಲಿ ಕುಳಿತು ಕೊಳ್ಳುವಂತೆ ಹೇಳಿದ್ದು, ಈ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಹೆದರಿಸಿದ್ದಾನೆ.
ಇದರಿಂದ ಹೆದರಿದ ಬಾಲಕಿಯು ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದಳು, ಅವರು ಈ ವಿಷಯವನ್ನು ಪೋಷಕರಿಗೆ ತಿಳಿಸಿದ್ದು, ಈ ಹಿನ್ನಲೆಯಲ್ಲಿ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.