ಚಿಕ್ಕಮಗಳೂರು: ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಸುರಕ್ಷಾ(19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ, ಹಬ್ಬಕ್ಕೆ ಮನೆಗೆ ತೆರಳಿದ್ದಾಗ ಪೋಷಕರು ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಬಿ.ಎ ವ್ಯಾಸಂಗ ಮಾಡುತ್ತಿದ್ದ ಅವರು ಸಚ್ಚಿದಾನಂದಪುರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಉಳಿದು ಕಾಲೇಜಿಗೆ ತೆರಳುತ್ತಿದ್ದರು. ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋದಾಗ ಮನೆಯಲ್ಲಿ ವಿಷ ಸೇವಿಸಿದ್ದಾಳೆ.