ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ

Share with

ಮಕ್ಕಳ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಕಡೇಶ್ವಾಲ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.

ಮಕ್ಕಳ ಕಲಾಲೋಕ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಡೇಶ್ವಾಲ್ಯ ಇವರ ಸಹಯೋಗದಲ್ಲಿ ಜರಗಲಿರುವ 17ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಕಡೇಶ್ವಾಲ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಸಮ್ಮೇಳನದ ಸ್ವರೂಪ, ಶೈಕ್ಷಣಿಕ ಮತ್ತು ಸಾಹಿತ್ಯಕ ಉದ್ದೇಶಗಳನ್ನು ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ. ಬಾಯಾರು ಸಭೆಗೆ ನೀಡಿದರು.

ಸಮ್ಮೇಳನದ ಯಶಸ್ಸಿನ ಬಗ್ಗೆ ಸಭೆಯಲ್ಲಿ ಚರ್ಚಿಸಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಸೈನಿಕ ಕಲ್ಯಾಣ ಇಲಾಖೆಯ ನಿವೃತ್ತ ಅಧೀಕ್ಷಕ ಬಿಳಿಯೂರು ಗುತ್ತು ಕಿಟ್ಟಣ್ಣ ಶೆಟ್ಟಿ ಕುರುಂಬ್ಲಾಜೆ ಗೌರವಾಧ್ಯಕ್ಷರಾಗಿ, ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಇವರನ್ನು ಅಧ್ಯಕ್ಷರನ್ನಾಗಿ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಹರಿಶ್ಚಂದ್ರ ಎಂ. ಕಾರ್ಯಾಧ್ಯಕ್ಷರನ್ನಾಗಿ, ಉಪಾಧ್ಯಕ್ಷರಾಗಿ ನಿವೃತ್ತ ಮುಖ್ಯಶಿಕ್ಷಕ ಗಿರಿಯಪ್ಪ ಗೌಡ ಎಸ್. ಪೆರ್ಲಾಪು, ಪ್ರಧಾನ ಕಾರ್ಯದರ್ಶಿಯಾಗಿ ಕಡೇಶ್ವಾಲ್ಯ ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕ ಬಾಬು ಪೂಜಾರಿ ಕೆ., ಉಪಕಾರ್ಯದರ್ಶಿಯಾಗಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಮಮತಾ ಪೆರ್ಲಾಪು, ಕೋಶಾಧಿಕಾರಿಯಾಗಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮಾಧವ ರೈ ಅಮೈ ಭಂಡಸಾಲೆ, ಜೊತೆ ಕಾರ್ಯದರ್ಶಿಯಾಗಿ ಈಶ್ವರ ಪೂಜಾರಿ ಹಿರ್ತಡ್ಕ ಇವರನ್ನು ಆಯ್ಕೆ ಮಾಡಲಾಯಿತು . ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು. ದಶಂಬರ್ ಮೊದಲ ವಾರದಲ್ಲಿ ಸಮ್ಮೇಳನ ನಡೆಸಲು ಉದ್ದೇಶಿಸಲಾಯಿತು.

ಕಡೇಶ್ವಾಲ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್.ರಾವ್, ಪಂಚಾಯತ್ ಅಭಿವೃದ್ದಿ ಅಧಿಕಾರಿ ಸುನಿಲ್ ಕುಮಾರ್ ಸಲಹೆ ನೀಡಿದರು. ಕಡೇಶ್ವಾಲ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪಂಚಾಯತ್ ಸದಸ್ಯರು, ಎಸ್.ಡಿ.ಎಂ,ಸಿ ಸದಸ್ಯರು, ಊರ ಗಣ್ಯರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶರತ್ ಬಿ. ಶೆಟ್ಟಿ, ಕಡೇಶ್ವಾಲ್ಯ ಸಿ.ಆರ್.ಪಿ. ಸುಧಾಕರ್ ಭಟ್, ಬಾಳ್ತಿಲ ಸಿ.ಆರ್.ಪಿ ಸತೀಶ್ ರಾವ್, ಶಿಕ್ಷಕಿಯರಾದ ಅನಿತಾ, ಜ್ಯೋತಿ, ಸ್ವಾತಿ, ದೀಪ್ತಿ, ನಿಶಾ, ದಿವ್ಯಶ್ರೀ, ಮಮತಾ, ಶಿಕ್ಷಕರಾದ ಭಾಸ್ಕರ ನಾಯ್ಕ್, ವಿರಾಜ್ ವಾಬಳೆ ಉಪಸ್ಥಿತರಿದ್ದರು.

ಕಡೇಶ್ವಾಲ್ಯ ಶಾಲಾ ಶಿಕ್ಷಕಿ ಪ್ರೇಮ ಬಾಬು ಪೂಜಾರಿ ಸ್ವಾಗತಿಸಿದರು. ಕಾರ್ಯದರ್ಶಿ ಪುಷ್ಪಾ ಎಚ್ ವಂದಿಸಿದರು. ಮಕ್ಕಳ ಕಲಾ ಲೋಕದ ಉಪಾಧ್ಯಕ್ಷ ಶಿವರಾಮ ಭಟ್ ನೆಡ್ಲೆ ನಿರೂಪಿಸಿದರು.


Share with

Leave a Reply

Your email address will not be published. Required fields are marked *