ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲಿ ಯಾವುದೇ ಅಹಿತಕಾರಿ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರಾದ್ಯಂತ ಸೆಕ್ಷನ್ 144 ಜಾರಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಜನರು ಗುಂಪು ಸೇರುವುದು, ಪ್ರತಿಭಟನೆ, ಮೆರವಣಿಗೆ ಮಾಡುವುದು, ಭಾಷಣ ಮಾಡುವುದು, ಫ್ಲೆಕ್ಸ್, ಬಂಟಿಂಗ್ಸ್ ಬ್ಯಾನರ್ ಕಟ್ಟುವುದು, ಮಾರಕಾಸ್ತ್ರ, ಸ್ಫೋಟಕಗಳ ಬಳಕೆ ನಿರ್ಬಂಧಿಸಲಾಗಿದೆ.
ಈದ್ ಮಿಲಾದ್ ಮೆರವಣಿಗೆ ವೇಳೆ ಕಟೌಟ್ ವಿಚಾರವಾಗಿ ಶುರುವಾದ ವಾಗ್ವಾದ ಹಿಂಸಾ ರೂಪಕ್ಕೆ ತಿರುಗಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡ-ಶಾಂತಿನಗರ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಭಾನುವಾರ ರಾತ್ರಿ ಶಾಂತಿ ನಗರ-ರಾಗಿಗುಡ್ಡ ವಾರ್ಡ್ ಗೆ ಸೀಮಿತವಾಗಿ ಸೆಕ್ಷನ್ 144 ಹಾಕಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರಾದ್ಯಂತ ಸೆಕ್ಷನ್ 144 ಜಾರಿ ಮಾಡಲಾಗಿದೆ.