ನವದೆಹಲಿ: ನ್ಯೂಸ್‌ಕ್ಲಿಕ್ ಸುದ್ದಿ ಪೋರ್ಟಲ್‌ಗೆ ಸೇರಿದ ಹಲವಾರು ಪತ್ರಕರ್ತರ ಮನೆಗಳಿಗೆ ದೆಹಲಿ ಪೊಲೀಸರು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ ಎಂದು ವರದಿಯಾಗಿದೆ.
ನ್ಯೂಸ್ ಕ್ಲಿಕ್ ಪೋರ್ಟಲ್ ಚೀನಾದ ಸುದ್ದಿಯನ್ನು ಪ್ರಚಾರ ಮಾಡುವ ನೆಟ್‌ವರ್ಕ್‌ನಿಂದ ಹಣವನ್ನು ಪಡೆದಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಆಧರಿಸಿ ದೆಹಲಿ ಪೊಲೀಸರು ಆಗಸ್ಟ್ 17 ರಂದು ಪ್ರಕರಣ ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ವಿಶೇಷ ಘಟಕದ ಅಧಿಕಾರಿಗಳು ಅಕ್ಟೋಬರ್ 03 ರಂದು ದೆಹಲಿ ಮತ್ತು ಎನ್ ಸಿಆರ್ ನಲ್ಲಿ ನ್ಯೂಸ್ ಕ್ಲಿಕ್ ನ ಪತ್ರಕರ್ತರ ನಿವಾಸಗಳ ಮೇಲೆ ದಾಳಿ ನಡೆಸಿದ್ದು, ಈವರೆಗೂ ಯಾರನ್ನೂ ಬಂಧಿಸಿಲ್ಲ. ಆದರೆ ಕೆಲವು ಪತ್ರಕರ್ತರನ್ನು ಪೊಲೀಸ್ ಠಾಣೆಗೆ ಕರೆ ತಂದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿದೆ.