ಬಂಟ್ವಾಳ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರಿನಲ್ಲಿ ಅ.4ರಂದು ಮುಂಜಾನೆ ಬಾಳೆ ಹಣ್ಣು ಸಾಗಾಟದ ಪಿಕಪ್ ಒಂದು ಪಲ್ಟಿಯಾಗಿ ಚರಂಡಿಗೆ ಬಿದ್ದ ಘಟನೆ ನಡೆದಿದೆ.
ಸೂರಿಕುಮೇರ್ ಬದ್ರಿಯಾ ಜುಮಾ ಮಸೀದಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯ ಹೊಸ ರಸ್ತೆಯಲ್ಲಿ ತಮಿಳುನಾಡು ನೋಂದಾಯಿತ ಬಾಳೆಹಣ್ಣು ಸಾಗಾಟದ ಪಿಕಪ್ ವಾಹನವು ಪಲ್ಟಿ ಹೊಡೆದು ರಸ್ತೆ ಬದಿಯ ಚರಂಡಿಯೊಳಗೆ ನಿಂತಿದ್ದು, ನಿದ್ದೆಯ ಮಂಪರಿನಲ್ಲಿ ಬೆಳಗ್ಗಿನ ಜಾವ ಅಪಘಾತ ಸಂಭವಿಸಿದ್ದು ಚಾಲಕ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.