ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ

Share with

ಬಿಪಿಎಲ್ ಕಾರ್ಡ್ ಗೆ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ.

ಬೆಂಗಳೂರು: ಬಿಪಿಎಲ್ ಕಾರ್ಡ್ ಗೆ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅವಕಾಶವನ್ನು ನೀಡಿದೆ.

ಅದನ್ನು ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಸರಿಪಡಿಸಿಕೊಳ್ಳಬಹುದಾಗಿದೆ. ಪಡಿತರ ಚೀಟಿಯಲ್ಲಿನ ಹೆಸರು ರದ್ದುಪಡಿಸುವುದು, ಕುಟುಂಬದ ಹೊಸ ಸದಸ್ಯರ ಹೆಸರು ಸೇರಿಸುವುದು, ಹೆಸರಿನಲ್ಲಿನ ಲೋಪದೋಷಗಳ ತಿದ್ದುಪಡಿ, ವಿಳಾಸ ಬದಲಾವಣೆಯಂತಹ ಪರಿಷ್ಕರಣೆಗೆ ಅವಕಾಶ ಒದಗಿಸಲಾಗಿದ್ದು, ಅದನ್ನು ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಿಗೆ ನಿಗಧಿತ ದಿನಾಂಕವನ್ನು ನೀಡಲಾಗಿದೆ.

ಅ.5ರಿಂದ 7ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಅವಕಾಶ ನೀಡಲಾಗಿದೆ. 2ನೇ ಹಂತವಾಗಿ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಸೇರಿ ಒಟ್ಟು 15 ಜಿಲ್ಲೆಗಳಿಗೆ ಅ.8 ರಿಂದ ಅ.10ರ ವರೆಗೆ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

3ನೇ ಹಂತದಲ್ಲಿ ಕಲಬುರಗಿ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಸೇರಿ ಒಟ್ಟು 14 ಜಿಲ್ಲೆಗಳಿಗೆ ಅ.11 ರಿಂದ ಅ.13ರ ವರೆಗೆ ಅವಕಾಶ ನೀಡಲಾಗಿದೆ.


Share with

Leave a Reply

Your email address will not be published. Required fields are marked *