ಪಲ್ಲಕ್ಕಿ ಬಸ್​ಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Share with

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಲ್ಲಕ್ಕಿ ಬಸ್​ಗಳಿಗೆ ಚಾಲನೆಯನ್ನು ನೀಡಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಲ್ಲಕ್ಕಿ ಬಸ್​ಗಳಿಗೆ ಚಾಲನೆಯನ್ನು ನೀಡಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಸಂಪುಟ ಸಚಿವರು ಹೊಸ ಬಸ್​​ಗಳನ್ನು ವೀಕ್ಷಿಸಿದರು.

ಸಿಎಂ ಸಿದ್ದರಾಮಯ್ಯ ಮತ್ತು ಸಂಪುಟ ಸಚಿವರು ಹೊಸ ಬಸ್​​ಗಳನ್ನು ವೀಕ್ಷಿಸಿದರು.

ಒಟ್ಟು 148 ಬಸ್​ಗಳಿಗೆ ಚಾಲನೆ ನೀಡಲಾಗಿದ್ದು, 40 ನಾನ್ ಎಸಿ ಸ್ಲೀಪರ್ ಹಾಗೂ 100 ನಗರ ಸಾರಿಗೆ ಬಸ್ಸುಗಳು, ಅಶೋಕ ಲೇಲ್ಯಾಂಡ್ ಕಂಪನಿಗೆ ಸೇರಿದ್ದು, ನಾಲ್ಕು ನಾನ್ ಎಸಿ ಸ್ಲೀಪರ್, ನಾಲ್ಕು ಎಸಿ ಸ್ಲೀಪರ್ ಬಸ್​ಗಳು ಟಾಟಾ ಕಂಪನಿಯದ್ದಾಗಿವೆ. ಈ ಪೈಕಿ 44 ಎಸಿ ಸ್ಲೀಪರ್, ನಾಲ್ಕು ನಾನ್ ಎಸಿ ಸ್ಲೀಪರ್ ಬಸ್​ಗಳನ್ನು ಹೊರತುಪಡಿಸಿ ಉಳಿದ 100 ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ.

ಮಂಗಳೂರು, ಉಡುಪಿ, ಪುತ್ತೂರು, ಶಿವಮೊಗ್ಗ, ಕಾರವಾರ, ಬೆಳಗಾವಿ, ಹುಬ್ಬಳ್ಳಿ, ಬೀದರ್‌, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ ಸಹಿತ ರಾಜ್ಯದ ಬೇರೆ ಬೇರೆ ಊರುಗಳಿಗೆ ಈ ಬಸ್ಸುಗಳು ಸಂಚರಿಸಲಿವೆ. ಜೊತೆಗೆ ಹೊರ ರಾಜ್ಯಗಳಾದ ಪಾಂಡಿಚೇರಿ, ಚೆನ್ನೈ, ಕೊಯಮತ್ತೂರು, ಮಂತ್ರಾಲಯ, ಕುಂಭಕೋಣಕ್ಕೆ ಪ್ರಯಾಣಿಸುವವರಿಗೂ ‘ಪಲ್ಲಕ್ಕಿ’ ಬಸ್‌ ಸೌಲಭ್ಯ ಸಿಗಲಿದೆ.

ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುನಿಯಪ್ಪ, ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ, ಸಾರಿಗೆ ಅಧಿಕಾರಿಗಳು ಭಾಗಿಯಾಗಿದ್ದರು


Share with

Leave a Reply

Your email address will not be published. Required fields are marked *