ಸುಳ್ಯ: ಮಹಿಳೆಯೊಬ್ಬರು ಮನೆಯಲ್ಲಿ ಇನ್ವರ್ಟರ್ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಮ್ಮಾರಿನಿಂದ ವರದಿಯಾಗಿದೆ.
ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55 ಪ್ರಾಯ) ಎಂಬುವವರು ಮೃತ ಪಟ್ಟ ಮಹಿಳೆಯಾಗಿದ್ದು, ಅವರು ಪ್ರತಿದಿನ ಮಲಗುವ ಸಮಯದಲ್ಲಿ ಇನ್ವರ್ಟರ್ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್ ಅನ್ನು ತೆಗೆದು ಮಲಗುತ್ತಿದ್ದರೆನ್ನಲಾಗಿದೆ. ನಿನ್ನೆ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ ಪ್ಲಗ್ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತದರೂ ಅಷ್ಟಾಗಲೇ ಅವರು ಮೃತಪಟ್ಟರೆಂದು ತಿಳಿದು ಬಂದಿದೆ.