ಕಾಪು: ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಮುಂಬಯಿಯಲ್ಲಿ ಬಂಧಿಸಿ, ಕರೆ ತಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹತ್ತು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಉದ್ಯಾವರ ಅಂಕುದ್ರು ನಿವಾಸಿ ಗಣೇಶ್ ಪೂಜಾರಿ (44) ಬಂಧಿತ ಆರೋಪಿಯಾಗಿದ್ದು, 2013 ಮತ್ತು 2014ರಲ್ಲಿ ಕಾಪು ಪೊಲೀಸ್ ಠಾಣೆ ವ್ಯಾಪ್ತಿಯ ಮೂರು ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯು ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ವಾರಂಟ್ ಮತ್ತು ಪ್ರೋಕ್ಲಮೇಷನ್ ಹೊರಡಿಸಲಾಗಿತ್ತು. ಆರೋಪಿಯನ್ನು ಕಾಪು ಪೊಲೀಸರು ಮುಂಬಯಿಯಲ್ಲಿ ಬಂಧಿಸಿ, ಕರೆ ತಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ವರದಿಯಾಗಿದೆ.