ಬಂಟ್ವಾಳ: ಅಳಿವಿನ ಅಂಚಿನಲ್ಲಿರುವ ಅಪರೂಪದ ವನ್ಯ ಜೀವಿಯಾದ ಉಡಾವನ್ನು ವ್ಯಕ್ತಿಯೊಬ್ಬ ಬೇಟೆಯಾಡಿ ಬಳಿಕ ಅದನ್ನು ಹಿಡಿದು ಫೋಟೊಗಳಿಗೆ ಫೋಸ್ ನೀಡಿ ವಿಜ್ರಂಭಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ವಗ್ಗದಲ್ಲಿ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.
ಉಡಾವನ್ನು ಸಾಯಿಸಿದ ವ್ಯಕ್ತಿಯನ್ನು ವಗ್ಗದ ಸುಧಾಕರ ಎಂದು ಗುರುತಿಸಲಾಗಿದೆ. ಆತನ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯಿದೆ 1972 ಅನ್ವಯ ಕೇಸ್ ದಾಖಲು ಮಾಡಿದ್ದಾರೆ. ಫೋಟೊಗಳಿಗೆ ಫೋಸ್ ನೀಡಿ ಅದನ್ನು ಸಾಮಾಜಿಕ ಜಾಲಾತಾಣಗಳಲ್ಲಿ ಹರಿಯ ಬಿಟ್ಟಿದ್ದ.
ದೂರು ದಾಖಲಾಗುತ್ತಿದ್ದಂತೆ ಆರೋಪಿ ತಲೆ ಮರೆಸಿಕೊಂಡಿದ್ದು, ಬಂಟ್ವಾಳ ವಲಯ ಅರಣ್ಯಾಧಿಕಾರಿಯವರು ಪ್ರಕರಣದ ತನಿಖೆ ನಡಸುತ್ತಿದ್ದಾರೆ ಎಂದು ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಅಂಥೋಣಿ ಎಸ್. ಮರಿಯಪ್ಪ ಮಾಹಿತಿ ನೀಡಿದ್ದಾರೆ.
ಉಡಾ ಸಾಯಿಸಿದ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದ್ದು, ಆರೋಪಿ ಸುಧಾಕರ್ ತಲೆ ಮರೆಸಿಕೊಂಡಿದ್ದಾನೆ. ಆತ ಉಡಾ ಸಾಯಿಸಿ ಶೇರ್ ಮಾಡಿದ ಸಾಮಾಜಿಕ ಜಾಲಾತಾಣ ವಾಟ್ಸ್‌ಅಪ್ ಎಡ್ಮಿನ್ ನನ್ನು ವಿಚಾರಣೆ ಕರೆಸಿ ತನಿಖೆ ನಡಸಿದ್ದು ಆತನ ಸಿಡಿಆರ್ ಪರಿಶೀಲನೆ ನಡೆಸುತ್ತಿದ್ದು ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದಿದ್ದಾರೆ.