ಶರಣ್ ಪಂಪ್ ವೆಲ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

Share with

ಶರಣ್ ಪಂಪ್ ವೆಲ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಬೆಂಗಳೂರು: ಮಂಗಳೂರಿನ ಮಂಗಳಾದೇವಿ ಜಾತ್ರೆಯಲ್ಲಿ ಭಗವಾಧ್ವಜ ಕಟ್ಟಿರುವ ಹಿಂದೂಗಳ ಮಳಿಗೆಗಳಲ್ಲಿ ಮಾತ್ರವೇ ಹಿಂದೂ ಗ್ರಾಹಕರು ವ್ಯಾಪಾರ ಮಾಡಬೇಕು ಎಂದು ಪ್ರಕಟಣೆ ಹೊರಡಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ವಿಶ್ವ ಹಿಂದೂ ಪರಿಷತ್‌ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಕುರಿತಂತೆ ಶರಣ್‌ ಪಂಪ್‌ವೆಲ್‌ ಸಲ್ಲಿಸಿದ್ದ ಅರ್ಜಿಯನ್ನು ರಜಾಕಾಲದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು ಕೆಲ ಕಾಲ ಪ್ರಕರಣವನ್ನು ಆಲಿಸಿದ ಪೀಠವು ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾಧಿಕಾರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್‌ ಶ್ಯಾಮ್, ‘ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಪ್ರಕಟಣೆ ಹೊರಡಿಸಲಾಗಿದೆ ಎಂಬ ದೂರಿನಲ್ಲಿ ಹುರುಳಿಲ್ಲ. ಈ ಸಂಬಂಧ ಪೊಲೀಸರು ಸ್ವಯಂಪ್ರೇರಿತವಾಗಿ ದಾಖಲು ಮಾಡಿಕೊಂಡಿರುವ ಈ ಪ್ರಕರಣ ರಾಜಕೀಯ ಪ್ರೇರಿತವಾಗಿದೆ ಮತ್ತು ದುರುದ್ದೇಶದಿಂದ ಕೂಡಿದೆ. ಆದ್ದರಿಂದ, ಎಫ್‌ಐಆರ್‌ ರದ್ದುಗೊಳಿಸಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶಿಸಿತು.


Share with

Leave a Reply

Your email address will not be published. Required fields are marked *