ನದಿಗೆ ಸ್ನಾನಕ್ಕೆ ಹೋದ ಇಬ್ಬರು ನೀರು ಪಾಲು

Share with

ನದಿಗೆ ಸ್ನಾನಕ್ಕೆಂದು ಹೋದ ಇಬ್ಬರು ನೀರು ಪಾಲಾದ ಘಟನೆ ಹೆಬ್ರಿ ಸಮೀಪದ ಕಬ್ಬಿನಾಲೆ ಮತ್ತಾವು ಎಂಬಲ್ಲಿ ನಡೆದಿದೆ.

ಉಡುಪಿ: ನದಿಗೆ ಸ್ನಾನಕ್ಕೆಂದು ಹೋದ ಇಬ್ಬರು ನೀರು ಪಾಲಾದ ಘಟನೆ ಹೆಬ್ರಿ ಸಮೀಪದ ಕಬ್ಬಿನಾಲೆ ಮತ್ತಾವು ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕರ್ಜೆ ನಿವಾಸಿ ಉಮೇಶ್ ಶೆಟ್ಟಿ(48) ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಚಾರ ಹುರ್ತುರ್ಕೆ ನಿವಾಸಿ ಪ್ರಸ್ತುತ್ ಹೆಗ್ಡೆ(21) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಅ.21ರಂದು ಸಂಜೆ 3 ಗಂಟೆಗೆ ಸ್ನಾನಕ್ಕೆ ಹೋದವರು ಕಾಲು ಜಾರಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಘಟನೆ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *