
ಸುರತ್ಕಲ್: ಪಣಂಬೂರಿನಲ್ಲಿರುವ ಎನ್.ಎಂ.ಪಿ.ಎ. ಮುಖ್ಯ ದ್ವಾರದ ಬಳಿ ಸಿಐಎಸ್ಎಫ್ ಭದ್ರತಾ ಸಿಬ್ಬಂದಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ರಾಯಚೂರು ನಿವಾಸಿ, ಸಿಐಎಸ್ಎಫ್ ಸಬ್ ಇನ್ಸ್ಪೆಕ್ಟರ್ ಝಾಕಿರ್ ಹುಸೈನ್(54) ಎಂದು ಗುರುತಿಸಲಾಗಿದ್ದು, ಝಾಕಿರ್ ಹುಸೈನ್ ಅವರು ನವ ಮಂಗಳೂರು ಬಂದರ್ ನ ಮುಖ್ಯ ದ್ವಾರದಲ್ಲಿ ರಾತ್ರಿ ಪಾಳಿಯ ಕೆಲಸ ನಿರ್ವಹಿಸಿದ್ದು, ಇಂದು ಬೆಳಗ್ಗೆ 6:30ರ ಸುಮಾರಿಗೆ ತನ್ನ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿದೆ.
ಪಣಂಬೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣದ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.




