ನಾಪತ್ತೆಯಾಗಿದ್ದ ಹೆಡ್‌ಕಾನ್‌ಸ್ಟೇಬಲ್‌ ಮೃತದೇಹ ಪತ್ತೆ

Share with

ಕಾರ್ಕಳ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶೃತಿನ್ ಶೆಟ್ಟಿ.

ಕಾರ್ಕಳ: ನಾಪತ್ತೆಯಾಗಿದ್ದ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಅವರ ಮೃತದೇಹ ಕಾರ್ಕಳ ಲಕ್ಷ್ಮೀದೇವಿ ಕಲ್ಯಾಣ ಮಂಟಪ ಸಮೀಪ ಪತ್ತೆಯಾಗಿದೆ.

ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾರ್ಕಳ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶೃತಿನ್ ಶೆಟ್ಟಿ(35) ಅವರ ಮೃತದೇಹ ಅ.23ರಂದು ಪತ್ತೆಯಾಗಿದೆ.

ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ ಅ.19ರಂದು ಕಾಣೆಯಾಗಿದ್ದು, ಅಂದು ರಾತ್ರಿ 7.30ಕ್ಕೆ ಪತ್ನಿಗೆ ಫೋನ್ ಮಾಡಿ ನಾನು ನಂದಿಕೂರಿನಲ್ಲಿದ್ದು ಮನೆಗೆ ಬರುತ್ತಿರುವುದಾಗಿ ಹೇಳಿದ್ದರು. ಅನಂತರ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಶೃತಿನ್ ಪತ್ನಿ ನಾಪತ್ತೆ ದೂರು ದಾಖಲಿಸಿದ್ದರು.

2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಇವರು ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ಕುರಿತು ಪೊಲೀಸರು ಅಸಹಜ ಸಾವು ಪ್ರಕರಣ ಎಂದು ದಾಖಲಿಸಿದ್ದಾರೆ.


Share with

Leave a Reply

Your email address will not be published. Required fields are marked *