ಮೈಸೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ನೀಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ನಾನು ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ. ನನಗೆ ಒಳ್ಳೆಯ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೆಯ ಕೆಲಸ ಮಾಡುತ್ತಿದ್ದೇನೆ. ನನಗೆ ವರಿಷ್ಠರಿಂದಲೂ ಯಾವ ಸೂಚನೆ ಬಂದಿಲ್ಲ. ಇಂತಹ ಸುದ್ದಿ ಹೇಗೆ ಬರುತ್ತಿವೆಯೋ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ನನ್ನ ಇಚ್ಚೆ ಇರೋದು ಮುಂದಿನ ಭಾರಿಯೂ ಮೋದಿ ಅವರು ಪ್ರಧಾನಿಯಾಗಬೇಕು. ಅದನ್ನೇ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ಹೇಳಿದ್ದಾರೆ.