ಬೆಳ್ತಂಗಡಿ: ಕಳೆದ ಮೂರು ತಿಂಗಳ ಹಿಂದೆ ಸುಕ್ಕೇರಿಯಲ್ಲಿ ನಡೆದ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾವರ ಗ್ರಾಮದ ಯುವಕ ವಿಘ್ನೇಶ್ (23) ಚಿಕಿತ್ಸೆ ಫಲಕಾರಿಯಾಗದೆ ಅ.25 ಬೆಳಗ್ಗಿನ ಜಾವ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಬೆಳ್ತಂಗಡಿ ತಾಲೂಕಿನ ಸುರಿಯಲ್ಲಿ ಕಳೆದ ಮೂರು ತಿಂಗಳ ಹಿಂದೆ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳಿಯರ ಸಹಕಾರದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋಮ ಸ್ಥಿತಿಯಲ್ಲಿದ್ದ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ನಂತರ ಉಜಿರೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಊರಿನ ಸಂಘ ಸಂಸ್ಥೆಗಳು, ದಾನಿಗಳು ವೈದ್ಯಕೀಯ ನೆರವು ನೀಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನರಾಗಿದ್ದಾರೆ.




