ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಧರಿಸಿರುವುದರಿಂದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನವಾಗಿದೆ. ಇದಾದ ಬಳಿಕ ಎಲ್ಲೆಲ್ಲೂ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ನಟ ಜಗ್ಗೇಶ್ ಅವರು ಕೂಡ ಹುಲಿ ಉಗುರು ಧರಿಸುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. “ನನಗೆ 20 ವರ್ಷ ಆದಾಗ ನನ್ನಮ್ಮ ನನ್ನ ಮಗ ಹುಲಿ ಇದ್ದಂಗೆ ಇರಬೇಕು ಅಂತ ಹೇಳಿ ಒರಿಜಿನಲ್ ಹುಲಿ ಉಗುರಿನಲ್ಲಿ ಈ ಲಾಕೆಟ್ ಇರುವ ಸರ ಮಾಡಿಸಿ ಹಾಕಿದ್ದರು” ಎಂದಿದ್ದು, ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಹಲವು ಸ್ಟಾರ್ ನಟರು, ನಿರ್ಮಾಪಕರು, ರಾಜಕಾರಣಿಗಳು ಹಾಗೂ ಉದ್ಯಮಿಗಳ ವಿರುದ್ಧವೂ ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪ ಕೇಳಿ ಬರುತ್ತಿದೆ. ಆದರೆ ಪ್ಲಾಸ್ಟಿಕ್‌ನಿಂದ ತಯಾರಿಸಿದ ವಸ್ತುಗಳು ಮಾರುಕಟ್ಟೆಯಲ್ಲಿ ಲಭ್ಯವಿರುವುದರಿಂದ ‘ಹುಲಿ ಉಗುರಿನ’ ಪೆಂಡೆಂಟ್ ಧರಿಸಿದ್ದಾರೋ ಇಲ್ಲವೋ ಎಂಬುದನ್ನು ಖಚಿತವಾಗಿ ಹೇಳಲು ಸಾಧ್ಯವಿಲ್ಲ!.