ಹಿರಿಯ ಪತ್ರಕರ್ತ ಶೇಖರ್ ಅಜೆಕಾರು ಹೃದಯಾಘಾತದಿಂದ ನಿಧನ

Share with

ಕಾರ್ಕಳ: ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಶೇಖರ್ ಅಜೆಕಾರು (54) ಅವರು ಅ.31ರಂದು ಹೃದಯಾಘಾತದಿಂದ ನಿಧನ ಹೊಂದಿದರು.

ಸಾಹಿತಿ ಶೇಖರ್ ಅಜೆಕಾರು (54) ಅವರು ಅ.31ರಂದು ಹೃದಯಾಘಾತದಿಂದ ನಿಧನ ಹೊಂದಿದರು.

ಬೆಳಿಗ್ಗೆ ಅಜೆಕಾರಿನ ತನ್ನ ಮನೆಯಲ್ಲಿ ಕುಸಿದು ಬಿದ್ದ ಶೇಖರ್ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆಗಾಗಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು ಎಂದು ತಿಳಿದು ಬಂದಿದೆ.

ಬೆಳದಿಂಗಳ ಸಾಹಿತ್ಯ ಸಮ್ಮೇಳನ, ಕವಿಗೋಷ್ಟಿಯಂಥ ವಿಭಿನ್ನ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಗಮನ ಸೆಳೆದಿದ್ದ ಶೇಖರ್ ಅಜೆಕಾರು ಅವರು ಮುಂಬಯಿಯಲ್ಲಿ ಪತ್ರಿಕೋದ್ಯಮವನ್ನು ಪ್ರಾರಂಭಿಸಿದವರು. ಮುಂಬಯಿಯ ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ ಉಪಸಂಪಾದಕರಾಗಿದ್ದ ಅವರು ಬಳಿಕ ಮಂಗಳೂರಿನ ಕೆಲವು ಪತ್ರಿಕೆಗಳಿಗೆ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.

ಲೇಖಕರಾಗಿ ಅವರ ಜೀವನ ಚರಿತ್ರೆ “ಅಜೆಕಾರಿನ ಅಜೆಕಾರು” ಸಹಿತ ಹಲವು ಪುಸ್ತಕಗಳನ್ನು ಪ್ರಕಟಿಸಿರುವ ಶೇಖರ್ ಅಜೆಕಾರು ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಷ್ಟ್ರೀಯ ಬಸವಶ್ರೀ ಅವಾರ್ಡ್ 2018, ಕೃಷಿ ಬಂಧು 2019, ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪ್ರಶಸ್ತಿ 2019, ವಿಶ್ವ ದರ್ಶನ ಸಾಹಿತ್ಯ ಪ್ರಶಸ್ತಿ 2019, ತುಳುವ ಮಾಧ್ಯಮ ರತ್ನ, ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್‌ನ ಮಾಧ್ಯಮ ಸೇವಾ ರತ್ನ, ಶಿಖಾ ಭಾರತ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ.

ಲೇಖಕರಾಗಿ, ಛಾಯಾಗ್ರಾಹಕರಾಗಿ, ಸಂಘಟಕರಾಗಿ, ಶಿಕ್ಷಣ ತಜ್ಞರಾಗಿ, ತರಬೇತುದಾರರಾಗಿ ಹೀಗೆ ಹಲವು ರೀತಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಕನ್ನಡ-ತುಳು ಭಾಷೆಯ ಸಾಹಿತಿಯಾಗಿ, ನಾಡು ನುಡಿಯ ಸೇವಕರಾಗಿ ಖ್ಯಾತರಾಗಿದ್ದ ಇವರು ತುಳುನಾಡಿನ ವಿಶೇಷ ಕಂಬಳ ಕ್ರೀಡೆಯ ಕುರಿತ ಕೃತಿಗಳನ್ನು ಪ್ರಕಟಿಸಿದ್ದಾರೆ ಮತ್ತು ಅವರ ಹತ್ತಾರು ಕೃತಿಗಳು ಪ್ರಕಟಗೊಂಡಿವೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.


Share with

Leave a Reply

Your email address will not be published. Required fields are marked *