ಕೆಕೆಆರ್‌ಟಿಸಿ ಬಸ್‌ಗೆ ಬೆಂಕಿ: ಕರ್ನಾಟಕ-ಮಹಾರಾಷ್ಟ್ರ ಮಧ್ಯೆ‌ ಬಸ್ ಸಂಚಾರ ಸ್ಥಗಿತ

Share with

ಬೆಳಗಾವಿ: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಈ ಹೋರಾಟದ ಕಿಚ್ಚಿಗೆ ಮರಾಠಿಗರು ಕರ್ನಾಟಕ ರಾಜ್ಯದ ಬಸ್‌ಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಕೆಕೆಆರ್‌ಟಿಸಿ ಬಸ್‌ಗೆ ಬೆಂಕಿ.

ಮಹಾರಾಷ್ಟ್ರದ ಉಸ್ಮಾನಾಬಾದ್​ ಜಿಲ್ಲೆಯ ಉಮರಗಾ ತಾಲೂಕಿನ ತುರೋರಿ ಗ್ರಾಮದಲ್ಲಿ ಬೀದರ್‌ ಜಿಲ್ಲೆ ಭಾಲ್ಕಿಯಿಂದ ಮಹಾರಾಷ್ಟ್ರದ ಪುಣೆಗೆ ತೆರಳುತ್ತಿದ್ದ ಬಸ್‌ಗೆ ಬೆಂಕಿ ಹಚ್ಚಲಾಗಿದ್ದು, ಸದ್ಯ KA38F1201 ಸಂಖ್ಯೆಯ ಕೆಕೆಆರ್‌ಟಿಸಿ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದಿದ್ದರಿಂದ ಸೋಮವಾರ ರಾತ್ರಿಯಿಂದಲೇ ಕರ್ನಾಟಕ-ಮಹಾರಾಷ್ಟ್ರ ಮಧ್ಯೆ‌ ಬಸ್ ಸಂಚಾರವನ್ನು ಅಧಿಕಾರಿಗಳು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದ್ದು, ಸೋಮವಾರ ಕಾರ್ಯಾಚರಣೆಯಲ್ಲಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ್ ರಾಜ್ಯ ಬಸ್ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆ.ಕೆ.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕರಾದ ಎಂ.ರಾಚಪ್ಪ ಅವರು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *