ಕರ್ನಾಟಕದ ಕೆಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ

Share with

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಗುಡುಗು ಸಹಿತ ಮಳೆಯ ಮುನ್ಸೂಚನೆ.

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮೈಸೂರು ಅಲ್ಲಲ್ಲಿ ಸಾಮಾನ್ಯವಾಗಿದ್ದರೆ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಉಳಿದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನ ಮುನ್ಸೂಚನೆಯಂತೆ ನವೆಂಬರ್ 1 ಹಾಗೂ 2ರಂದು ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ 3ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.


Share with

Leave a Reply

Your email address will not be published. Required fields are marked *