ಕಾಸರಗೋಡು: ಖಾಸಗಿ ಬಸ್ ಮಾಲಕರ ಮುಷ್ಕರ

Share with

ಕಾಸರಗೋಡು: ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಖಾಸಗಿ ಬಸ್ ಮಾಲಕರು ಅ.31ರಂದು ಕೇರಳ ರಾಜ್ಯವ್ಯಾಪಿ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದಾರೆ.

ಖಾಸಗಿ ಬಸ್ಸು ಮುಷ್ಕರದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆ.ಎಸ್.ಆರ್ ಟಿ.ಸಿ ಬಸ್ಸುಗಳು ಎಂದಿನಂತೆ ಸಂಚಾರ ನಡೆಸುತ್ತಿದೆ. ಅದರಿಂದ ನಗರ ಪ್ರದೇಶಗಳಲ್ಲಿ ಮುಷ್ಕರದ ಬಿಸಿ ಹೆಚ್ಚಿನ ಪ್ರಮಾಣದಲ್ಲಿ ತಟ್ಟಿಲ್ಲ.

ಬೇಡಿಕೆ ಈಡೇರಿಸದಿದ್ದಲ್ಲಿ ನವಂಬರ್ 21ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಮಾಲಕರು ಮುನ್ನೆಚ್ಚರಿಕೆ ನೀಡಿದ್ದಾರೆ.


Share with

Leave a Reply

Your email address will not be published. Required fields are marked *