ಕರಾವಳಿಯಲ್ಲೂ ಶೀಘ್ರ ಸಂಚರಿಸಲಿದೆ ಎಲೆಕ್ಟ್ರಿಕ್ ಬಸ್ ಗಳು!

Share with

ಮಂಗಳೂರು: ಈಗಾಗಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್ ಕಾರ್ಯಾಚರಿಸುತ್ತಿದ್ದು, ಕರಾವಳಿಯಲ್ಲೂ ಕೂಡ ಎಲೆಕ್ಟ್ರಿಕ್ ಬಸ್ ರಸ್ತೆಗಿಳಿಯುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿದು ಬಂದಿದೆ.

ಕರಾವಳಿಯಲ್ಲೂ ಕೂಡ ಎಲೆಕ್ಟ್ರಿಕ್ ಬಸ್ ರಸ್ತೆಗಿಳಿಯುವ ಸಾಧ್ಯತೆ ಹೆಚ್ಚಿದೆ.

ಕೆಲವು ದಿನಗಳ ಹಿಂದೆಯಷ್ಟೇ ಮೊದಲನೇ ಹಂತದಲ್ಲಿ ನಿಗಮ ಸೇರಿದ್ದ ಇವಿ ಪ್ಲಸ್ ಬಸ್ ಗಳ ಕಾರ್ಯಾಚರಣೆಯನ್ನು ಮೈಸೂರು, ವೀರಾಜಪೇಟೆ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ರೂಟ್ ಗಳಿಗೆ ಆದ್ಯತೆ ನೀಡಲಾಗಿತ್ತು. ಇದೀಗ ಸದ್ಯದಲ್ಲೇ ಎರಡನೇ ಹಂತದಲ್ಲಿ ಎಲೆಕ್ಟ್ರಿಕ್ ಬಸ್ ಖರೀದಿಗೆ ರಾಜ್ಯ ಸರಕಾರ ಮುಂದಾಗಿದ್ದು, ಈ ವೇಳೆ ಮಂಗಳೂರು, ಪುತ್ತೂರು ಕೆ.ಎಸ್.ಆರ್.ಟಿ.ಸಿ ವಿಭಾಗಕ್ಕೂ ಎಲೆಕ್ಟ್ರಿಕ್ ಬಸ್ ಗಳು ಹಂಚಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಎಲೆಕ್ಟ್ರಿಕಲ್ ಬಸ್ ಗಳು ಸಾಮಾನ್ಯವಾಗಿ ಒಂದು ಬಾರಿ ಚಾರ್ಜ್ ಮಾಡಿದರೆ ಸುಮಾರು 250 ಕಿ.ಮೀ. ಸಂಚರಿಸುತ್ತದೆ. ಅದಕ್ಕೆ ಸಂಬಂಧಿಸಿ ಪೂರಕ ಕೆಲಸಗಳೂ ನಡೆಯುತ್ತಿವೆ. ಮೂಲಗಳ ಮಾಹಿತಿಯ ಪ್ರಕಾರ ಸುಮಾರು 40 ಎಲೆಕ್ಟ್ರಿಕ್‌ ಬಸ್‌ಗಳು ಕರಾವಳಿ ಭಾಗದಲ್ಲಿ ಕಾರ್ಯಾಚರಿಸಲಿದ್ದು, ಅದಕ್ಕೆ ಸಂಬಂಧಿಸಿದ ಪೂರಕ ಕೆಲಸಗಳೂ ನಡೆಯುತ್ತಿವೆ. ಎಲೆಕ್ಟ್ರಿಕ್‌ ಬಸ್‌ಗಳ ಚಾರ್ಜ್‌ಗೆಂದು ಚಾರ್ಜಿಂಗ್‌ ಸ್ಟೇಷನ್‌ ಸ್ಥಾಪನೆಗೆ ಈಗಾಗಲೇ ಮಂಗಳೂರಿನಲ್ಲಿ ಜಾಗ ಹುಡುಕಲಾಗುತ್ತಿದ್ದು ಕುಂಟಿಕಾನ ದಲ್ಲಿರುವ ಮೂರನೇ ಡಿಪೋದಲ್ಲಿ ಮತ್ತು ಬಿಜೈ ಡಿಪೋದಲ್ಲಿ ಚಾರ್ಜಿಂಗ್‌ ಸ್ಟೇಷನ್‌ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ. ಅದರಂತೆ ಪುತ್ತೂರು ವಿಭಾಗದಲ್ಲಿಯೂ ಜಾಗ ಹುಡುಕಾಟ ನಡೆಯುತ್ತಿದೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *