ಮಂಜೇಶ್ವರ: ಮಂಜೇಶ್ವರ ಕನಿಲ ಶ್ರೀ ಭಗವತೀ ಕ್ಷೇತ್ರದ ಪುನರ್ ನಿರ್ಮಾಣಗೊಳ್ಳಲಿರುವ ಸಮಗ್ರ ಕ್ಷೇತ್ರ ನಿರ್ಮಾಣ ಕಾರ್ಯಗಳ ನಿಧಿ ಸಂಗ್ರಹಕ್ಕಾಗಿ ನಿಧಿ ಸಮರ್ಪಣಾ ಕಾರ್ಯಕ್ರಮ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ ಈ ತಿಂಗಳ 5ರಂದು ನಡೆಯಲಿದೆ.
ಬೆಳಿಗ್ಗೆ 8.30ಕ್ಕೆ 108 ಕಾಯಿಗಳ ಮಹಾಗಣಯಾಗ, 11 ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಮಣಿಲ ಶ್ರೀ ಧಾಮದ ಶ್ರೀ ಮೋಹನದಾಸ್ ಸ್ವಾಮೀಜಿ, ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಉಪಸ್ಥಿತರಿದ್ದು ಆಶೀರ್ವಚನ ನೀಡುವರು.
ಬ್ರಹ್ಮಶ್ರೀ ಬಡಾಜೆ ಬೂಡು ಗೋಪಾಲಕೃಷ್ಣ ತಂತ್ರಿ, ವಿಜಯ ಗುರೂಜಿ, ಕೃಷ್ಣ ಕಾರ್ನವರ್, ವಿಶ್ವನಾಥ ಕುದುರು ಉಪಸ್ಥಿತರಿರುವರು. ಅಧ್ಯಕ್ಷತೆಯನ್ನು ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪದ್ಮನಾಭ ಕಡಪ್ಪರ ವಹಿಸುವರು. ಸದಾಶಿವ ಶೆಟ್ಟಿ ಕುಳೂರು ಕನ್ಯಾನ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸುವರು. ನಿಧಿ ಸಂಚಯನ ಕಾರ್ಯಕ್ರಮವನ್ನು ಜೀರ್ಣೋದ್ದಾರ ಸಮಿತಿ ಗೌರವಧ್ಯಕ್ಷ ಕೃಷ್ಣ.ಎನ್ ಉಚ್ಚಿಲ್ ಉದ್ಘಾಟಿಸುವರು. ಮಲ್ಪೆ ಮಾಜಿ ಶಾಸಕ ಪ್ರಮೋದ್ ಮದ್ವರಾಜ್ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು. ಕ್ಷೇತ್ರದ ಪದಾಧಿಕಾರಿಗಳ ಸಹಿತ ವಿವಿಧ ವಲಯದ ಹಲವು ಗಣ್ಯರು ಭಾಗವಹಿಸುವರು.