ಕಾರ್ಕಳ: ಡಿಯೋ ಸ್ಕೂಟಿವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಹೊಸ್ಮಾರು-ನಾರಾವಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.


ನ.1ರಂದು ರಾತ್ರಿ ವೇಳೆಗೆ ಈ ಘಟನೆ ಸಂಭವಿಸಿದ್ದು ನಾರಾವಿಯ ಸಂತೋಷ್ ಘಟನೆಯಲ್ಲಿ ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.
ಸಾರ್ವಜನಿಕರು 108 ಅಂಬುಲೆನ್ಸ್ ಗೆ ಕರೆ ಮಾಡಿದ ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುವಿಗೆ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುವನ್ನು ಅಜ್ಜರುಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.




