ಶ್ರೀಲಂಕಾ ವಿರುದ್ಧ ಭಾರತ ಭರ್ಜರಿ ಜಯ

Share with

ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ ಏಳನೇ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ಸೆಮಿಫೈನಲ್‌ಗೆ ಪ್ರವೇಶಿಸಿದೆ.

ಏಕದಿನ ವಿಶ್ವಕಪ್‌ನ 33ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ಹಂಗಾಮಿ ನಾಯಕ ಕುಶಾಲ್ ಮೆಂಡಿಸ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್‌ಗಳಲ್ಲಿ ವಿಕೆಟ್ ಕಳೆದುಕೊಂಡು 357 ರನ್ ಗಳಿಸಿತು. ಇದನ್ನು ಬೆನ್ನತ್ತಿದ ಶ್ರೀಲಂಕಾ ತಂಡವನ್ನು 19.4 ಓವರ್‌ಗಳಲ್ಲಿ ಕೇವಲ 55 ರನ್‌ಗಳಿಗೆ ಟೀಮ್ ಇಂಡಿಯಾ ಆಲೌಟ್ ಮಾಡಿದೆ. ಈ ಮೂಲಕ 302 ರನ್‌ಗಳ ಬೃಹತ್ ಅಂತರದ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ವಿಶ್ವಕಪ್ 2023ರ ಸೆಮಿಫೈನಲ್‌ಗೆ ಪ್ರವೇಶಿಸಿದೆ.

18 ರನ್ನಿಗೆ ಐದು ವಿಕೆಟ್ ಗಳಿಸಿದ ಮೊಹಮ್ಮದ್ ಶಮಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮೊಹಮ್ಮದ್ ಸಿರಾಜ್ ಮೂರು ಮತ್ತು ಜಸ್‌ಪ್ರೀತ್ ಬೂಮ್ರಾ ಒಂದು ವಿಕೆಟ್ ಗಳಿಸಿ ಮಿಂಚಿದರು.


Share with

Leave a Reply

Your email address will not be published. Required fields are marked *