ದೇರಳಕಟ್ಟೆ ಫಾದರ್ ಮುಲ್ಲರ್ ನಲ್ಲಿ ನ.4 ಮತ್ತು 5ರಂದು ಹೋಮಿಯೋಪತಿ ಫೆಸ್ಟ್ ಹಾಗೂ ರಾಷ್ಟ್ರ ಹೋಮಿಯೋಪತಿ ಸಮ್ಮೇಳನ

Share with

ಮಂಗಳೂರು: ನ.4 ಮತ್ತು 5ರಂದು ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ವತಿಯಿಂದ ದಕ್ಷಿಣ ಭಾರತ ಹೋಮಿಯೋಪತಿ ಫೆಸ್ಟ್ ಮತ್ತು 26ನೇ ರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ ‘ಪ್ರೇರಣಾ -23’ ಹಮ್ಮಿಕೊಳ್ಳಲಾಗಿದೆ ಎಂದು ಫಾಧರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯ ನಿರ್ದೇಶಕ ವಂದನೀಯ ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಅವರು ತಿಳಿಸಿದ್ದಾರೆ.

ದಕ್ಷಿಣ ಭಾರತ ಹೋಮಿಯೋಪತಿ ಫೆಸ್ಟ್ ಮತ್ತು 26ನೇ ರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ 'ಪ್ರೇರಣಾ -23' ಹಮ್ಮಿಕೊಳ್ಳಲಾಗಿದೆ ಎಂದು ವಂದನೀಯ ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಅವರು ಸುದ್ದಿಗೋಷ್ಠಿ ತಿಳಿಸಿದ್ದಾರೆ.

ನ.2ರಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ|ಸದ್ದಾಮ್ ನವಾಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯ ನಿರ್ದೇಶಕ ವಂದನೀಯ ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

‘ಪ್ರೇರಣಾ -23’ ನಲ್ಲಿ ಒಟ್ಟು 10 ಸ್ಪರ್ಧೆಗಳು ನಡೆಯಲಿದ್ದು, ದಕ್ಷಿಣ ಭಾರತದ ಸುಮಾರು 16 ಕಾಲೇಜುಗಳಿಂದ 525 ಹೋಮಿಯೋಪತಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಹಾಗೂ ವಿಜೇತರಿಗೆ ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ ಬಹುಮಾನ ನೀಡಲಾಗುವುದು ಎಂದರು.

ಈ ಹೋಮಿಯೋ ಫೆಸ್ಟ್ ವಿವಿಧ ಹೋಮಿಯೋಪತಿ ವೈದ್ಯಕೀಯ ಕಾಲೇಜುಗಳ ಪದವಿ ಪೂರ್ವ ವಿದ್ಯಾರ್ಥಿಗಳಲ್ಲಿ ಪಠ್ಯ ಮತ್ತು ಪಠ್ಯೇತರ ಪ್ರತಿಭೆಗಳನ್ನು ಬಿಂಬಿಸಲು ಒಂದು ವೇದಿಕೆಯಾಗಿದ್ದು, ಹೋಮಿಯೋಪತಿ ಭಾತೃತ್ವದ ಸಾಂಸ್ಕೃತಿಕ ಶಕ್ತಿಯನ್ನು ಪ್ರದರ್ಶಿಸುವ ದಿನವಾಗಿದೆ ಎಂದರು.

26ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನವು ನ.5 ರಂದು ನಡೆಯಲಿದ್ದು, ದೇಶದ ವಿವಿಧ ಭಾಗಗಳಿಂದ ಸುಮಾರು 720 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ವಾರ್ಷಿಕ ಮ್ಯಾಗಝೀನ್ ಬಿಡುಗಡೆ ಮಾಡಿ ಕವರ್ ಡಿಸೈನ್ ಸ್ಪರ್ಧೆಯ ವಿಜೇತರನ್ನು ಸನ್ಮಾನಿಸಲಾಗುವುದು ಹಾಗೂ ಫಾಧರ್ ಮುಲ್ಲರ್ ಹೋಮಿಯೋಪತಿ ಫಾರ್ಮಸ್ಯೂಟಿಕಲ್ ವಿಭಾಗದಲ್ಲಿ ತಯಾರಾದ ಹೊಸ ಹೋಮಿಯೋಪಥಿ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗುವುದು ಮತ್ತು ನಿವೃತ್ತ ಪ್ರೊಫೆಸರ್ ಡಾ.ಶ್ರೀನಾಥ್ ರಾವ್ ಅವರನ್ನು ಸನ್ಮಾನಿಸಲಾಗುವುದು. ಸಮಾರೋಪ ಸಮಾರಂಭ ಅಂದು ಸಂಜೆ 5 ಗಂಟೆಗೆ ನಡೆಯಲಿದೆ ಎಂದು ವಂದನೀಯ ರಿಚರ್ಡ್ ಅಲೋಶಿಯಸ್ ಕುವೆಲ್ಲೋ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಸಹಾಯಕ ಆಡಳಿತಾಧಿಕಾರಿ ಫಾ.ಅಶ್ವಿನ್ ಕ್ರಾಸ್ತಾ, ಪ್ರಾಂಶುಪಾಲ ಡಾ|ಪ್ರಭುಕಿರಣ್, ಉಪ ಪ್ರಾಂಶುಪಾಲೆ ಡಾ|ವಿಲ್ಮಾ ಮೀರಾ ಡಿಸೋಜ, ವೈದ್ಯಕೀಯ ಅಧೀಕ್ಷಕ ಡಾ|ಗಿರೀಶ್ ನಾವಡ, ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಡಾ|ಅಮಿತಾ ಬಾಳಿಗಾ, ಸಂಯೊಜಕ ಡಾ|ರಖಾಲ್ ಪಿ., ಮಾಧ್ಯಮ ಸಮಿತಿಯ ಡಾ|ಅನುಷ ಜಿ.ಎಸ್., ಡಾ|ಜಿನೋ, ಡಾ|ಧೀರಜ್ ಮೊದಲಾದವರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *