ಚಿಕ್ಕಮಗಳೂರು: ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದು, ಮಹಿಳೆಯೋರ್ವರು ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ ಕ್ರಾಸ್ ಬಳಿ ನ.4ರ ಶನಿವಾರ ನಡೆದಿದೆ ಎಂದು ವರದಿಯಾಗಿದೆ.


ಯಲಹಂಕ ನಿವಾಸಿ ಸುರೇಖಾ (45) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ಬೆಂಗಳೂರಿಂದ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರ ಬಸ್ ನಲ್ಲಿ ಸುಮಾರು 48ಕ್ಕೂ ಹೆಚ್ಚು ಪ್ರವಾಸಿಗರಿದ್ದು, ಬೆಂಗಳೂರು-ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಹೋಗುತ್ತಿದ್ದ ಬಸ್ ಆಗಿದೆ.
ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಬೆಳಗಿನ ಜಾವ ನಡೆದಿದ್ದು, ಗಾಯಾಳುಗಳನ್ನು ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.




