ಹೆಚ್ಚು ಶಬ್ದ ಉಂಟು ಮಾಡುವ ಪಟಾಕಿ ಬಳಕೆ ನಿಷೇಧ

Share with

ಮಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕರ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮತ್ತು ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿರಿಸುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸುಡುಮದ್ದುಗಳನ್ನು ಮಾರಾಟ ಮಾಡುವುದು ಮತ್ತು ಬಳಸುವುದು ನಿಷೇಧಿಸಲ್ಪಟ್ಟಿದೆ. ಆದ್ದರಿಂದ ಸಾರ್ವಜನಿಕರು 125 ಡೆಸಿಬೆಲ್‌ ಅಥವಾ 145 ಡೆಸಿಬೆಲ್‌ಗಿಂತ ಹೆಚ್ಚು ಶಬ್ದ ಪಟಾಕಿ ಹಾಗೂ ಸುಡುಮದ್ದುಗಳನ್ನು ಉಪಯೋಗಿಸಬಾರದು.

ಹೆಚ್ಚು ಶಬ್ದ ಪಟಾಕಿ ಹಾಗೂ ಸುಡುಮದ್ದುಗಳನ್ನು ಉಪಯೋಗಿಸಬಾರದು.

ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ. ದಿನದ ಯಾವುದೇ ಸಮಯದಲ್ಲಿ ನಿಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳಾದ ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರದ ಸುತ್ತಮುತ್ತಲಲ್ಲಿ ಯಾವುದೇ ರೀತಿಯ ಶಬ್ದ ಉಂಟು ಮಾಡುವ ನಿಷೇಧಿತ ಪಟಾಕಿ ಸಿಡಿಮದ್ದುಗಳನ್ನು ಬಳಸಬಾರದು. ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಲು ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿರುತ್ತದೆ.

ನಗರ ಮತ್ತು ಪಟ್ಟಣದ ಚಿಕ್ಕ ಬೀದಿಗಳಲ್ಲಿ ಪಟಾಕಿ ಮತ್ತು ಸಿಡಿಮದ್ದುಗಳನ್ನು ಬಾಣ, ಬಿರುಸುಗಳನ್ನು ಉಪಯೋಗಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿ ಉಂಟಾಗುವ, ಬೆಂಕಿ ಅಥವಾ ಸ್ಪೋಟದಿಂದ ಅಪಾಯಗಳಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿ ಹಾಗೂ ಸಿಡಿಮದ್ದುಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಒಟ್ಟಾಗಿ ಸೇರಿ ಸಿಡಿಸಲು ವಿನಂತಿಸಲಾಗಿದೆ ಅಲ್ಲದೆ ದೀಪಾವಳಿ ಹಬ್ಬವನ್ನು ಸಿಡಿಮದ್ದು ಪಟಾಕಿಗಳನ್ನು ಉಪಯೋಗಿಸದೆ ದೀಪದ ಹಬ್ಬವನ್ನಾಗಿ ಆಚರಿಸಲು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


Share with

Leave a Reply

Your email address will not be published. Required fields are marked *