ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಮನೆಗೆ ಪುತ್ತೂರು ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ಅವರು ಭೇಟಿ ನೀಡಿ ಮನೆ ಮಂದಿಗೆ ಸಾಂತ್ವನದ ನುಡಿಗಳನ್ನಾಡಿದ್ದಾರೆ.


ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು ಆರೋಪಿಗಳಿಗೆ ಕಾನೂನಿನ ಪ್ರಕಾರ ಶಿಕ್ಷೆ ಆಗಬೇಕು, ಅಕ್ಷಯ್ ಅವರು ಸ್ನೇಹಿತರಿಂದಲೇ ಹತ್ಯೆಯಾದದ್ದು ಖೇದಕರ ವಿಚಾರವಾಗಿದೆ, ಗೆಳೆಯರ ನಡುವಿನ ಕ್ಷುಲ್ಲಕ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ಈಗಾಗಲೇ ಪೊಲೀಸ್ ಇಲಾಖೆಯ ಮುಖ್ಯಸ್ಥರ ಜೊತೆ ಮಾತನಾಡಿದ್ದು, ಪುತ್ತೂರಿನಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ ಎಂದರು. ದೇಶದ ಕಾನೂನಿನಲ್ಲಿ ಬದಲಾವಣೆ ಮಾಡುವ ಅವಶ್ಯಕತೆ ಇದ್ದು, ಇವತ್ತು ಬಂಧನವಾದವರು 3 ತಿಂಗಳ ಬಳಿಕ ಹೊರ ಬರುತ್ತಾರೆ, ಹಾಗೆ ಆಗಬಾರದು ಎಂದರು.



ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದರೆ, ಇನ್ನೊಂದೆಡೆ ಅಕ್ಷಯ್ ಮನೆಯಲ್ಲಿ ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟಿದೆ.




