ಮಾಜಿ ಶಾಸಕ ರಘುಪತಿ ಭಟ್ ಪತ್ನಿ ನಾಪತ್ತೆ, ಆತ್ಮಹತ್ಯೆ ಪ್ರಕರಣ: ಆರೋಪಿ ಅತುಲ್ ರಾವ್ ಗೆ ಜೈಲು ಶಿಕ್ಷೆ

Share with

ಉಡುಪಿ: ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯಾ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ರಘುಪತಿ ಭಟ್ ಅವರ ನಿಕಟವರ್ತಿ ಅತುಲ್ ರಾವ್ ನ ಸುಧೀರ್ಘ ವಿಚಾರಣೆ ನಡೆದು ಇದೀಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

ಪದ್ಮಪ್ರಿಯಾ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ರಘುಪತಿ ಭಟ್ ಅವರ ನಿಕಟವರ್ತಿ ಅತುಲ್ ರಾವ್ ನ ಸುಧೀರ್ಘ ವಿಚಾರಣೆ ನಡೆದು ಇದೀಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಉಡುಪಿ ನ್ಯಾಯಾಲಯವು ಶುಕ್ರವಾರ(ನ.10) ಆದೇಶ ನೀಡಿದೆ.

2008ರ ಜೂನ್ 10ರಂದು ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಅಂದು ರಘುಪತಿ ಭಟ್ ಅವರ ಸ್ನೇಹಿತ, ಅದೇ ಊರಿನ ಅತುಲ್ ರಾವ್, ಮನೆಯಿಂದ ಪದ್ಮಪ್ರಿಯ ಅವರನ್ನು ಆಕೆಯ ಕಾರಿನಲ್ಲಿ ಕರೆದು ಕೊಂಡು ಹೋಗಿ ಕುಂಜಾರುಗಿರಿಯ ದಾರಿ ಮಧ್ಯೆ ಕಾರನ್ನು ಇಟ್ಟು, ಅದರ ಒಳಗೆ ಬಳೆಯ ಚೂರು, ರಕ್ತದ ಕಲೆಗಳನ್ನು ಮಾಡಿ ಅಪಹರಣದ ನಾಟಕ ಮಾಡಿದ್ದರೆಂದು ಆರೋಪಿಸಲಾಗಿತ್ತು. ಈ ಬಗ್ಗೆ ರಘುಪತಿ ಭಟ್ ಅವರು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು.

ಆರಂಭದಲ್ಲಿ ತನಿಖೆ ನಡೆಸಿದ ಮಣಿಪಾಲ ಪೊಲೀಸರು, ನಂತರ ಸಿಒಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಆರೋಪಿ ವಿರುದ್ಧ ಸಿಒಡಿ ಪೊಲೀಸರು 2008ರ ಆ.22ರಂದು ಪ್ರಾರಂಭಿಕ ಮತ್ತು 2009ರ ಜು.29ರಂದು ಅಂತಿಮ ಚಾರ್ಜ್‌ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು, ಇದರಲ್ಲಿ ಮೋಸ, ವಂಚನೆ, ನಕಲಿ ದಾಖಲೆ ಸೃಷ್ಟಿ, ನಕಲಿ ದಾಖಲೆಯನ್ನು ನೈಜ ದಾಖಲೆ ಎಂಬುದಾಗಿ ಬಿಂಬಿಸಿ ಹಾಜರುಪಡಿಸಿ ದುರುಪಯೋಗ ಪಡಿಸಿರುವ ದೋಷಾರೋಪ ಹೊರಿಸಲಾಗಿತ್ತು. ಇದರಲ್ಲಿ ರಘುಪತಿ ಭಟ್ ನೀಡಿರುವ ದೂರಿನಲ್ಲಿ ತಿಳಿಸಿರುವ ಪದ್ಮಪ್ರಿಯಾಳ ಅಪಹರಣ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಆರೋಪವನ್ನು ಸಾಕ್ಷ್ಯದ ಕೊರತೆ ಹಿನ್ನೆಲೆಯಲ್ಲಿ ಸಿಓಡಿ ಅಧಿಕಾರಿಗಳು ಕೈಬಿಟ್ಟಿದ್ದರು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಯೋಗೇಶ್ಯೋಗೇಶ್ ಅವರು ಆರೋಪಿ ಮೇಲಿನ ಆರೋಪಗಳು ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟು ಒಂದು ವರ್ಷ ಜೈಲು ಶಿಕ್ಷೆ ಮತ್ತು 5,000 ರೂಪಾಯಿ ದಂಡ ವಿಧಿಸಿದೆ.


Share with

Leave a Reply

Your email address will not be published. Required fields are marked *